Slider

ರಾಜ್ಯದಲ್ಲಿ ಒಮಿಕ್ರಾನ್ ತಡೆಗೆ ಟಫ್ ರೂಲ್ಸ್:-ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ.ಲಾಕ್‌ಡೌನ್ ಸುಳಿವು ನೀಡಿದ ಆರ್.ಅಶೋಕ್2-1-2022

ರಾಜ್ಯ:-ರಾಜ್ಯದಲ್ಲಿ ಒಮಿಕ್ರಾನ್ ತಡೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಒಮಿಕ್ರಾನ್ ವೈರಸ್ ತಡೆಗಟ್ಟಲು ರಾಜ್ಯದಲ್ಲಿ ಈ ಹಿಂದಿನಂತೆ ಟಫ್ ರೂಲ್ಸ್ ಜಾರಿಗೊಳಿಸುತ್ತೇವೆ, ಈಗಾಗಲೇ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ, ಹೀಗಾಗಿ ರಾಜ್ಯದಲ್ಲಿ ಕಠಿಣ ನಿಯಮವನ್ನು ಜಾರಿಗೊಳಿಸುವ ಮುನ್ಸೂಚನೆ ನೀಡಿದ್ದಾರೆ.

ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ತಜ್ಞರು ನೀಡಿದ ಸಲಹೆಯನ್ವಯ ಮುಂದಿನ ಕ್ರಮಕೈಗೊಳ್ಳಲಾಗುವುದು, ಜನವರಿ ೬ ರಂದು ಸಿ.ಎಂ ಜೊತೆ ಟಾಸ್ಕ್ ಫೋರ್ಸ್ ಸಮಿತಿಯ ಸಭೆ ನಡೆಯಲಿದ್ದು, ಅಲ್ಲಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo