Slider

ಉಡುಪಿ:- ಎಂ.ಐ.ಟಿ ಕ್ಯಾಂಪಸ್‌ನಲ್ಲಿ ಕೋವಿಡ್ ಏರಿಕೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸೂಚನೆ.2-1-2022

ಉಡುಪಿ:- ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.

ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾತ್ತಿದ್ದು, ಈ ಸಂಖ್ಯೆಯು ಎಂ.ಐ.ಟಿ. ಪರಿಸರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದರ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

14 ವರ್ಷ ಮೆಲ್ಪಟ್ಟವರಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಬೇಕು , ಲಸಿಕೆ ನೀಡಿದ ನಂತರ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು, ಲಸಿಕೆ ನೀಡುವ ಸಂದರ್ಭದಲ್ಲಿ ಪೋಷಕರು ಹಾಜರಿರುವಂತೆ ನೋಡಿಕೊಳ್ಳಬೇಕು, ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಾರ್ಡನ್ ಗಳು ನಿಗಾ ವಹಿಸಬೇಕು ಎಂದರು.

ವರದಿ:-ಉಡುಪಿ ಫಸ್ಟ್.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo