Slider

ಉಡುಪಿ:-ಜಿಲ್ಲೆಯಲ್ಲಿ ಕೋವಿಡ್ ಉಲ್ಬಣ ಮಕ್ಕಳಿಗೆ ವಕ್ಕರಿಸಿದೆ ಸೋಂಕು 20-1-2022

ಉಡುಪಿ: ದಿನೇ ದಿನೇ ಕೊರೊನಾ ಮತ್ತು ಒಮಿಕ್ರಾನ್‌ ಪ್ರಕರಣಗಳು ಹೆಚ್ಚುತ್ತಿರುವ ಜೊತೆಗೆ ಶಾಲೆ, ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಅಧಿಕವಾಗಿ ಕಾಣಿಸಿಕೊಳ್ಳುತ್ತಿದೆ.

ಇನ್ನು ರಾಜ್ಯದ 1ರಿಂದ 10ನೇ ತರಗತಿಯ 6,826 ವಿದ್ಯಾರ್ಥಿಗಳಿಗೆ ಹಾಗೂ 1,819 ಶಿಕ್ಷಕರಿಗೆ ಕೊರೊನಾ ದೃಢಪಟ್ಟಿದೆ.

ಉಡುಪಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಒಟ್ಟು 1,600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕರೋನ ಬಾಧಿಸಿದೆ.

ಉಡುಪಿಯ 5 ವರ್ಷದೊಳಗಿನ ಸುಮಾರು 25 ವಿದ್ಯಾರ್ಥಿಗಳು, 5 ರಿಂದ 10 ವರ್ಷದ 90 ಜನ, 10 ರಿಂದ 15 ವರ್ಷದ 360, 15ರಿಂದ 20 ವರ್ಷದ 650 ಹಾಗೂ 20 ರಿಂದ 25 ವರ್ಷದ 600 ವಿದ್ಯಾರ್ಥಿಗಳು ಸೇರಿದಂತೆ 1,600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕರೋನ ದೃಢಪಟ್ಟಿದೆ.

ಕರೋನಾದ ಕುರಿತು ರಾಜ್ಯ ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ನಿರ್ದಿಷ್ಟ ತರಗತಿಗಳನ್ನು 5 ದಿನ ಬಂದ್‌ ಮಾಡಿ, ಸ್ಯಾನಿಟೈಸೇಶನ್‌ ಮಾಡಲಾಗುತ್ತಿದೆ ಹಾಗೂ ಉಡುಪಿ ಜಿಲ್ಲೆಯ ಯಾವುದೇ ಒಬ್ಬ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆವಹಿಸುವುದು ಅಗತ್ಯ

ಉಡುಪಿ ಜಿಲ್ಲೆಯ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ರ್ಯಾಪಿಡ್‌ ಆಯಂಟಿಜನ್‌ ರ್‍ಯಾಂಡಮ್‌ ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಗೊತ್ತಾಗುತ್ತಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮ ಸಾಧ್ಯವಾಗುತ್ತಿದೆ. 

ತಾಲೂಕುವಾರು ಶಾಲೆಗಳಲ್ಲಿ ಕೊರೊನಾ ಪರೀಕ್ಷೆಯನ್ನು ಅಭಿಯಾನದಂತೆ ನಡೆಸುತ್ತಿದ್ದೇವೆ. ಕೊರೊನಾ ದೃಢಪಟ್ಟ ಮಕ್ಕಳಲ್ಲಿ ರೋಗ ಲಕ್ಷಣ ಕಡಿಮೆ ಇರುವವರೇ ಹೆಚ್ಚು ಎಂದು ಅಧಿಕಾರಿಯೊಬ್ಬರು ವಿವರ ನೀಡಿದ್ದಾರೆ.

ಇನ್ನು ವಿದ್ಯಾರ್ಥಿಗಳಲ್ಲಿ ಕೊರೊನಾ ಬಗ್ಗೆ ಪ್ರತೀ ದಿನ ಮಾಹಿತಿ ಪಡೆಯಲಾಗುತ್ತಿದೆ. ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡುತ್ತಿದ್ದೇವೆ. ಪರಿಸ್ಥಿತಿ ಅವಲೋಕಿಸಿ ಸ್ಥಳೀಯವಾಗಿ ಶಾಲೆ ಅಥವಾ ತರಗತಿ ಬಂದ್‌ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಬಿ.ಸಿ. ನಾಗೇಶ್‌, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಹೇಳಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಮಕ್ಕಳಲ್ಲಿ ಕೊರೊನಾ ದೃಢಪಡುತ್ತಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಪರೀಕ್ಷೆ ಪ್ರಮಾಣಕ್ಕೆ ಹೋಲಿಸಿದರೆ ಪಾಸಿಟಿವಿಟಿ ದರದಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿಲ್ಲ. ಆದರೂ ವಿಶೇಷ ಜಾಗೃತಿ ಜತೆಗೆ ಶಾಲಾ ಕಾಲೇಜುಗಳಲ್ಲಿ ಅರಿವು ಅಭಿಯಾನ ನಡೆಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್.ಎಂ. ಹೇಳಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo