ಘಟನೆ ನಡೆದು ಇಷ್ಟು ದಿನ ಕಳೆದರೂ ಇನ್ನೂ ಪ್ರಕರಣ ಬಗೆಹರಿದಿಲ್ಲ. ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ಜನವರಿ.19 ರಂದು ಕುಂದಾಪುರ ಉಪ ವಿಭಾಗದ ಆಯುಕ್ತ ಕೆ.ರಾಜು ಅವರು ಕಾಲೇಜಿಗೆ ಭೇಟಿ ನೀಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲರು, ಅಭಿವೃದ್ಧಿ ಸಮಿತಿಯವರು ಹಾಗೂ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಕೂಡ ಅವರು ಪಡೆದಿದ್ದಾರೆ, ಈ ವರದಿಯನ್ನು ಸರಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ವಿವಾದ ಬಗೆಹರಿಯುವ ನಿಟ್ಟಿನಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ತಿಳಿದು ಬಂದಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಮಾತನಾಡಿ, ನನ್ನ ಸೂಚನೆಯಂತೆ ಎ.ಸಿಯವರು ಕಾಲೇಜಿಗೆ ತೆರಳಿ ಸಭೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇದು ಆ ಕಾಲೇಜಿಗೆ ಸಂಬಂಧಪಟ್ಟ ವಿಚಾರವಾಗಿದ್ದು, ಅದನ್ನು ಅಲ್ಲಿನ ಕಮಿಟಿಯವರು ತೀರ್ಮಾನ ತೆಗೆದು ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಮೂರು ವಾರಗಳಿಂದ ಸ್ಕಾರ್ಫ್ ಹಾಕಿದ ಕಾರಣಕ್ಕಾಗಿ ತರಗತಿ ಪ್ರವೇಶ ನಿರಾಕರಿಸಲ್ಪಟ್ಟ ಎಂಟು ಮಂದಿ ವಿದ್ಯಾರ್ಥಿನಿಯರು, ಈಗಲೂ ಕಾಲೇಜಿನ ಹೊರಗಡೆಯೇ ಕುಳಿತು ಮನೆಗೆ ವಾಪಾಸ್ಸು ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ