Slider


ಉಡುಪಿ:-ಗಣರಾಜ್ಯೋತ್ಸವ ಸಂಭ್ರಮ, ಉಸ್ತುವಾರಿ ಸಚಿವ ಎಸ್.ಅಂಗಾರ ಅವರಿಂದ ಧ್ವಜಾರೋಹಣ26-1-2022

ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಅಂಗಾರ ರವರು ಧ್ವಜಾರೋಹಣವನ್ನು ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಕರಾವಳಿ ಕಾವಲು ಪಡೆ ಅಧೀಕ್ಷಕರಾದ ಅಂಶು ಕುಮಾರ್ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo