ಶಾಲೆಯ ಸಮಿತಿಗಳು ಯಾವ ಸಮವಸ್ತ್ರ ಬೇಕು ಎಂಬುದನ್ನು ನಿರ್ಧರಿಸುತ್ತವೆ. ಬುರ್ಖಾ ನಿಷೇಧ ಮಾಡಬೇಕೆಂದು ಯಾರೂ ಹೇಳಿಲ್ಲ. ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಸ್ಪಷ್ಟಪಡಿಸಿದರು.
ಉಡುಪಿಯ ಸರಕಾರಿ ಶಾಲೆಯ ಆರು ಮಕ್ಕಳು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕರಾವಳಿಯ ಕೆಲ ಸಂಘಟನೆಗಳು ಇವರನ್ನು ಪ್ರಚೋದಿಸಿವೆ. ಉಳಿದ ಮಕ್ಕಳು ಎಂದಿನಂತೆ ಶಾಲೆಗೆ ಬಂದಿದ್ದಾರೆ. ಇವರ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ