ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು.
ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸುಳಿವು ನೀಡಿದ್ದಾರೆ.
ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೋರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಮುನ್ಸಚನೆ ಇತ್ತು. ಇದು ತಿಳಿದು ಬಾದಾಮಿಯಲ್ಲಿ ನಾಮ ಪಾತ್ರ ಹಾಕಿಸಿದ್ದೆ. ಅಲ್ಲಿ ಎಲ್ಲ ನಾಯಕರನ್ನು ಒಪ್ಪಿಸಿ ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದೆ. ಬಳಿಕ ಬದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದು ಶಾಸಕರಾದರು ಎಂದರು.
ಪರಿಷತ್ ಸ್ಥಾನಕ್ಕೆ ಶೀಗರದಲ್ಲೇ ರಾಜೀನಾಮೆ ನೀಡುತ್ತೇನೆ. ದೇವೇಗೌಡರನ್ನು ಕೇಳಿ ಮುಂದೆ ತೀರ್ಮಾಣ ಮಾಡುತ್ತೇನೆ.. ನನಗೆ ಸ್ಥಾನ ತಪ್ಪಿಸಿದ್ದರ ಬಗ್ಗೆ ಸಿದ್ದರಾಮಯ್ಯ ಉತ್ತರಿಸಬೇಕು. ಡಿ.ಕೆ. ಶಿವಕುಮಾರ್ ಗೂ ನಮಗೂ ಹೊಂದಾಣಿಕೆಯಾಗಲ್ಲ. ಸಿದ್ದರಾಮಯ್ಯೂ ನನಗೆ ಚೆನ್ನಾಗಿತ್ತು. ರಾಜಕೀಯ ವಿದ್ಯಾಮಾನ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ