Slider

ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ27-1-2022

ಬೆಂಗಳೂರು, ಜನವರಿ 27: ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು

. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಆದ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್‍ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.ಕೊರೊನಾ ಸೋಂಕು ಮೂರನೇ ಅಲೆಯಿಂದ ಯಾವ ಮಕ್ಕಳಿಗೂ ಹೆಚ್ಚಿನ ತೊಂದರೆಯಿಲ್ಲ. 

ಆದರೂ ಆರೋಗ್ಯದ ವಿಚಾರದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಆರೋಗ್ಯ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‍ಎಸ್‍ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್‌ಲೈನ್ ತರಗತಿ ಪ್ರಾರಂಭ ಆಗುವವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo