Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ನಾನ್ ಸಿ.ಆರ್.ಝಡ್. ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುವ ಬಗ್ಗೆ ಪರಿಶೀಲನೆ ಸಚಿವ ಹಾಲಪ್ಪ ಆಚಾರ29-1-2022

ಉಡುಪಿ : ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು.

ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  
     
ನಾನ್ ಸಿ.ಆರ್.ಝಢ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡಿದರೆ ಜಿಲ್ಲೆಯ ಜನತೆಗೆ ಕಡಿಮೆ ದರದಲ್ಲಿ ಸಾಕಷ್ಟು ಪ್ರಮಾಣದ ಉತ್ತಮ ಗುಣಮಟ್ಟದ ಮರಳು ದೊರೆಯುವ ಜೊತೆಗೆ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲಿಸಿ, ಜಿಲ್ಲೆಯ ಜನತೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
     
ರಾಜ್ಯದಲ್ಲಿ ಮರಳು ಮಿತ್ರ ಆಪ್ ಸಿದ್ಧಗೊಂಡಿದ್ದು, ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು ಎಂದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಸಹ ಪೈಲಟ್ ಆಗಿ ಯೋಜನೆಯನ್ನು ಆರಂಭಿಸುವಂತೆ ತಿಳಿಸಿದರು. 

 ಉಡುಪಿ ಜಿಲ್ಲೆಯಲ್ಲಿ ಯಾವ ಖನಿಜಗಳು ಲಭ್ಯವಿವೆ ಎಂಬ ಬಗ್ಗೆ ಪರಿಶೀಲಿಸಿ, ಈ ಬಗ್ಗೆ ನಿಗಧಿತ ಅವಧಿಯೊಳಗೆ ವರದಿ ನೀಡಿ ಹಾಗೂ ಜಲ್ಲಿ ಕ್ರಷರ್ಗಳನ್ನು ಸ್ಥಾಪಿಸಲು ಅನುಮತಿ ಕೋರಿರುವ ಅರ್ಜಿಗಳು ಸಮರ್ಪಕವಾಗಿದ್ದಲ್ಲಿ ಅನುಮತಿ ನೀಡುವಂತೆ ಮತ್ತು ಜಿಲ್ಲೆಯೊಳಗೆ ಅಕ್ರಮವಾಗಿ ನಡೆಯುವ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ 3600 ಲಕ್ಷ ರೂ. ರಾಜಸ್ವ ಸಂಗ್ರಹಣೆ ಗುರಿ ನೀಡಿದ್ದು, ಇದುವರೆಗೆ 2800 ಲಕ್ಷ ರೂ. ಸಂಗ್ರಹಣೆಯಾಗಿದ್ದು, ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣ ಗುರಿ ಸಾಧಿಸುವಂತೆ ಸಚಿವರು ತಿಳಿಸಿದರು.

 
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo