ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.24 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಅಂತಾರಾಷ್ಟ್ರೀಯ ವಿಮಾನದ ಮೂಲಕ ಮಂಗಳೂರು ಏರ್ಪೋರ್ಟ್ಗೆ ಬಂದ ಪ್ರಯಾಣಿಕನಿಂದ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈ ಪ್ರಯಾಣಿಕ ಮಕ್ಕಳ ಬಟ್ಟೆಯಲ್ಲಿ ಚಿನ್ನವನ್ನು ಅಡಗಿಸಿ ಸಾಗಾಟ ಮಾಡುತ್ತಿದ್ದ. ಈತನಿಂದ ರೂ. 6,42,320 ಮೌಲ್ಯದ 129 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನು ಪ್ರಯಾಣಿಕನಿಂದ ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ