ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆಗೆ ಮುಂದಾದ ಯುವಕ ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಸಂಜೆ ಸಂಭವಿಸಿದೆ.
ಮುನ್ನೂರು ಗ್ರಾಮದ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಸಾವನ್ನಪ್ಪಿದವರು.
ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೋ (22) ಎಂಬಾಕೆಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ