Slider

ರಾಜ್ಯದಲ್ಲಿ ಒಮಿಕ್ರಾನ್ ಗಣನೀಯ ಏರಿಕೆ:-ನಾಳೆ ಸಂಜೆ ತಜ್ಞರ ಜೊತೆ ಸಿ.ಎಂ ಮೀಟಿಂಗ್..?ಟಫ್ ರೂಲ್ಸ್ ಘೋಷಣೆ ಸಾಧ್ಯತೆ..??3-1-2022

ರಾಜ್ಯದಲ್ಲಿ ಕೋವಿಡ್ ಹಾಗೂ ಒಮಿಕ್ರಾನ್ ಸೋಂಕು ಗಣನೀಯವಾಗಿ ಏರಿಕೆಯಾದ ಹಿನ್ನೆಲೆ ನಾಳೆ ಸಂಜೆ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಚರ್ಚೆ ನಡೆಸುತ್ತೇವೆ.ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo