Slider

ಉಡುಪಿ:-ಲಾಕ್‌ಡೌನ್, ನೈಟ್ ಕರ್ಫ್ಯೂ ಅನಗತ್ಯ ಲಾಕ್‌ಡೌನ್‌ಗೆ ವಿರೋಧ ವ್ಯಕ್ತಪಡಿಸಿದ ಶಾಸಕ ರಘುಪತಿ ಭಟ್.3-1-2022

ಲಾಕ್‌ಡೌನ್ ಹಾಗೂ ರಾತ್ರಿ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ನಡೆದ ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂನ ಅವಶ್ಯಕತೆ ಸದ್ಯಕ್ಕಿಲ್ಲ, . ಹೊಸ ವರ್ಷ ಆಚರಣೆಯಲ್ಲಿ ಗೊಂದಲ ಆಗಬಹುದೆಂಬ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಫ್ಯೂನಿಂದ ಕೊರೋನ ತಡೆಯುತ್ತದೆ ಎಂಬುದನ್ನು ನಾನು ಒಪ್ಪಲ್ಲ ಎಂದು ಹೇಳಿದರು.
ನೈಟ್ ಕರ್ಫ್ಯೂ ಇದ್ದರೆ ಜನರಿಗೆ ಕೊರೋನ ಈಗಲೂ ಇದೆ ಎಂಬುದು ಅರ್ಥ ಆಗುತ್ತದೆ. ಇಲ್ಲದಿದ್ದರೆ ಕೊರೋನವೇ ಇಲ್ಲ ಎಂದು ಹೇಳಿ ಮಾಸ್ಕ್ ಹಾಕದೆ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತಾರೆ. ಜನರಿಗೆ ಎಚ್ಚರಿಕೆ ಇರಲಿ ಎಂಬ ಕಾರಣಕ್ಕೆ ತಜ್ಞರು ಇಂತಹ ಕ್ರಮಗಳ ಕುರಿತು ನಿರ್ದೇಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಸರಕಾರ ಮುಂದೆ ಲಾಕ್‌ ಡೌನ್ ಮಾಡಲಿಕ್ಕೆ ಮುಂದಾಗುವುದಿಲ್ಲ. ಕೊರೋನ ಸಂಖ್ಯೆ ತುಂಬಾ ಜಾಸ್ತಿಯಾದರೆ ಮಾಡಬಹುದು. ಆದರೆ ನನ್ನ ಅಭಿಪ್ರಾಯ ಲಾಕ್‌ ಡೌನ್ ಮಾಡುವುದು ಬೇಡ ಎಂದರು.
ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo