ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ರಾಜ್ಯದಲ್ಲಿ ಜನವರಿ 31ರಿಂದ ನೈಟ್ ಕರ್ಫ್ಯೂ ರದ್ದಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ಹೊಟೇಲ್, ಪಬ್ , ಬಾರ್ ರೆಸ್ಟೋರೆಂಟ್ ಸೇರಿದಂತೆ ಕೆಲವೆಡೆ 50:50ನಿಯಮವನ್ನು ರದ್ದುಗೊಳಿಸಲಾಗಿದೆ.
ಸಿನಿಮಾ ಮಂದಿರ ಹಾಗೂ ಮಲ್ಟಿ ಫ್ಲೈಕ್ಸ್ ಗಳಲ್ಲಿ 50:50 ರೂಲ್ಸ್ ಯಥಾಸ್ಥಿತಿ ಮುಂದುವರಿಕೆ.
ಧಾರ್ಮಿಕ ಕ್ಷೇತ್ರಗಳಲ್ಲಿ ದೇವರ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಶಾಲೆ ತೆರೆಯಲು ಕೂಡ ಅನುಮತಿ ನೀಡಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಒಳಾಂಗಣದಲ್ಲಿ 300ಜನರಿಗೆ ಹಾಗೂ ಹೊರಾಂಗಣದಲ್ಲಿ 400ಜನರಿಗೆ ಅನುಮತಿ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ