ಉಡುಪಿಯಲ್ಲಿ ಮಾತನಾಡಿದ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1985 ರಿಂದಲೂ ಸಮವಸ್ತ್ರ ಕಡ್ಡಾಯ ಇದೆ.
ಸಮವಸ್ತ್ರ ಬೇಕಾ ಬೇಡ್ವಾ ಎಂಬುದನ್ನು ಸರ್ಕಾರ ತೀರ್ಮಾನಿಸಲಿ, ಪದವಿ ಪೂರ್ವ ಕಾಲೇಜಿನ ಬೋರ್ಡ್ ಗೆ ನಾವು ಪತ್ರವನ್ನು ಬರೆದಿದ್ದೇವೆ. ಪತ್ರದಲ್ಲಿ ಸಮವಸ್ತ್ರ ಬೇಡ ಎಂದರೆ ಯಾರಿಗೂ ಕಡ್ಡಾಯ ಮಾಡಬೇಡಿ,
ಕೇಸರಿ ರುಮಾಲು, ಜೀನ್ಸ್, ಸ್ಲೀವ್ ಲೆಸ್ ಬಟ್ಟೆ ಹಾಕಿಕೊಂಡು ಬರಬಹುದೇ? ತಮಗಿಷ್ಟದ ಬಟ್ಟೆಯನ್ನು ಹಾಕಿಕೊಂಡು ಬರಲು ಅವಕಾಶ ಇದೆಯೇ? ಸರ್ಕಾರ ಉಡುಪಿಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯನ್ನು ಇಟ್ಟುಕೊಂಡು ಸರ್ಕಾರ ತೀರ್ಮಾನಿಸಬೇಕು ಎಂದು ಕೇಳಿದ್ದೇವೆ ಎಂದರು.
ಇನ್ನು ಸಮವಸ್ತ್ರ ಎಂದರೆ ಶಿಸ್ತು, ಸಮವಸ್ತ್ರ ಎಂದರೆ ಸಮಾನತೆ ಶಿಕ್ಷಣದಲ್ಲಿ ಸಮಾನತೆ ಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಹಿಜಾಬ್ ಧರಿಸುವುದರಿಂದ ಧರ್ಮದ ಬೇಧ ಬರುತ್ತದೆ.
ದೆಹಲಿ ಹೈಕೋರ್ಟು ಸಮವಸ್ತ್ರ ದ ಕುರಿತು ಈಗಾಗಲೇ ಸ್ಪಷ್ಟ ಆದೇಶ ನೀಡಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ಲರಿಗೂ ನಿಯಮ ಒಂದೇ ರೀತಿಯಾಗಿರಬೇಕು, ಕಾಲೇಜಿನಲ್ಲಿ ಹಲವಾರು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿದ್ದಾರೆ.
ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲವರು ವಿವಾದ ಸೃಷ್ಟಿ ಮಾಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಸೌಹಾರ್ದಯುತ ವಾತಾವರಣ ಇದೆ. ಜಿಲ್ಲೆಯ ಸೌಹಾರ್ದಯುತ ವಾತಾವರಣ ಮುಂದುವರೆಯಲು ಬಿಡಿ ಎಂದು ಉಡುಪಿ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ