Slider

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಪ್ರಾರಂಭವಾಗಿದೆ:-ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿಕೆ4-1-2022

ಬೆಂಗಳೂರು : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರು , ದೆಹಲಿ ಹಾಗೂ ಮಹಾರಾಷ್ಟ್ರದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಈ ನಿಮಿತ್ತ ಬೆಂಗಳೂರಿನಲ್ಲಿ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಇತ್ತೀಚೆಗಿನ ಕೊರೊನಾ ಪ್ರಕರಣಗಳನ್ನು ಗಮನಿಸುವುದಾದರೆ ಒಂದೇ ದಿನ ಬೆಂಗಳೂರಿನಲ್ಲಿ ಶೇ.1.90 ರಷ್ಟು ಏರಿಕೆಯಾಗಿದ್ದು, 1,290 ಕೇಸ್ ಪತ್ತೆ ಆಗಿದೆ. ಈಗಾಗಲೇ ಶೇ.90 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ಅನೇಕ ಕಡೆ ನಿಗಾ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

ಓಮಿಕ್ರಾನ್ ಆತ್ಯಂತ ವೇಗವಾಗಿ ಹರಡುತ್ತಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಪ್ರತಿ ದಿನ ಹೆಚ್ಚಾಗುತ್ತಿದೆ. ದೆಹಲಿ, ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಬಗ್ಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ವಹಿಸುತ್ತಿದೆ. ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo