ಉಡುಪಿಯ ಹಿಜಾಬ್ ಘಟನೆ ಮಾಸುವ ಮುನ್ನವೇ ದಕ್ಷಿಣ ಕನ್ನಡ ಕಾಲೇಜೊಂದರಲ್ಲಿ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದ ಸೃಷ್ಟಿಸಿದೆ.
ದಕ್ಷಿಣ ಕನ್ನಡದ ಕಿನ್ನಿಗೋಳಿ ಸಮೀಪದ ಕಾಲೇಜೊಂದರಲ್ಲಿ ಎಲ್ಲಿಯವರೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುತ್ತಾರೋ ಅಲ್ಲಿಯವರೆಗೆ ನಾವು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತೇವೆ ಎಂದು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಪ್ ಧರಿಸಿ ಹಾಜರಾದ ಕಾರಣ , ಹಿಂದೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಕೇಸರಿ ಶಾಲು ಹಾಕಿ ತರಗತಿಗೆ ಹಾಜರಾಗಿದ್ದಾರೆ
ಮುಸ್ಲಿಂ ವಿದ್ಯಾರ್ಥಿನಿಯರು ಸ್ಕಾರ್ಪ್ ತೆಗೆಯುವ ತನಕ ನಾವು ಕೇಸರಿ ಶಾಲು ತೆಗೆಯುವುದಿಲ್ಲ ಎಂದು ಇತರ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ನಮಗೆ ಹಿಂದು ಸಂಘಟನೆಗಳಾದ ಬಜರಂಗದಳ , ವಿಶ್ವಹಿಂದೂಪರಿಷತ್ , ಎಬಿವಿಪಿ ಬೆಂಬಲ ಸೂಚಿಸಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ