ಉಡುಪಿ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು. ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಎಂ. ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷರಾದ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕರಾದ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ