ರಾಜ್ಯ ಸರ್ಕಾರ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿರುವುದರಿಂದ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ಫ್ಯೂ ಸಂದರ್ಭ ಜಾತ್ರೆ ಅಥವಾ ದೊಡ್ಡ ಸಂಖ್ಯೆಯಲ್ಲಿ ಜನ ಸೇರಬಹುದಾದ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಪೂರ್ವ ನಿಗದಿಯಾಗಿರುವ ಧಾರ್ಮಿಕ, ಸಾಂಪ್ರದಾಯಿಕ ಆಚರಣೆಯನ್ನು ಕೊರೊನಾ ನಿಯಮ ಪಾಲಿಸಿಕೊಂಡು, ಜನ ಸೇರದಂತೆ ಎಚ್ಚರ ವಹಿಸಿ ನಡೆಸಲು ಅವಕಾಶವಿದೆ. ಹಾಸ್ಟೆಲ್‌ಗಳಲ್ಲೂ ಕೊರೊನಾ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು..
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ