TRENDING
-
ಉಡುಪಿ: ಟೈಯರ್ ಪಂಚರ್ ಶಾಪ್ ವೊಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭದಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿ...
-
ಉಡುಪಿ : ಕಲ್ಮಾಡಿ ಚರ್ಚ್ನ ಬಳಿ ಇರುವ ಹೊಸ ಕಟ್ಟಡದಲ್ಲಿ ಅಲ್ಯೂಮಿನಿಯಂನ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ 2ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆ...
-
ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕ...
-
ಉಡುಪಿ: ದುರಸ್ಥಿ ಕಾರ್ಯದ ನಿಮಿತ್ತ ಮೆಸ್ಕಾಂ ವತಿಯಿಂದ ಹಿರಿಯಡ್ಕ ಸಬ್ಸ್ಟೇಶನ್ನಲ್ಲಿ ಡಿ.24ರಂದು ವಿದ್ಯುತ್ ಸರಬರಾಜನ್ನು ಸ್ಥಗಿತ ಗೊಳಿಸುವ ಹಿನ್ನಲೆಯಲ್ಲಿ ಅಂದು ಬೆ...
-
ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಉದ್ಯಮದಾರರು, ನಗರಾಭಿವೃದ್ಧಿ ಇಲಾಖೆಯ ಸುತ್ತೋಲೆಯಂತೆ ತಂಬಾಕು ಉತ್ಪನ್ನಗಳ ಮಾ...
Slider
ಉಡುಪಿ:-ನಾಳೆ ವಾರಾಂತ್ಯ ಕರ್ಫ್ಯೂ .ಏನಿರುತ್ತೆ..? ಏನಿರಲ್ಲ..? ಸಂಪೂರ್ಣ ಮಾಹಿತಿ ಇಲ್ಲಿದೆ.7-1-2022
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ 19 ಪಾಸಿಟಿವಿಟಿ ದರ ದಿನೇ ಅಧಿಕವಾಗುತ್ತಿದೆ. ಪ್ರತಿದಿನ ಸರಾಸರಿ 4820 ಪರೀಕ್ಷೆ ನಡೆಸಲಾಗುತ್ತಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲೂ ಕೂಡಾ ಕೋವಿಡ್ ಗಾಗಿ ಬೆಡ್ ಗಳನ್ನು ನಿಗದಿ ಮಾಡಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ ರೌಂಡ್ಸ್ ಗಳನ್ನು ಕೂಡಾ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೂರ್ಮ ರಾವ್.ಎಂ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಕೆಯಾಗಿದೆ. ಶುಕ್ರವಾರ ರಾತ್ರಿ 10:00 ಗಂಟೆಯಿಂದ ಸೊಮವಾರ ಬೆಳಿಗ್ಗೆ 5:00 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಈ ನಡುವೆ ತುರ್ತು ಮತ್ತು ಅವಶ್ಯಕ ಸೇವೆಗಳಿಗೆ ಮಾತ್ರ ಅವಕಾಶ ಇದೆ. ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಭೂತ್ ಗಳು, ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳು ಕಾರ್ಯನಿರ್ವಹಿಸಲು ಅವಕಾಶವಿದೆ. ಬೀದಿಬದಿ ವ್ಯಾಪಾರಸ್ಥರು ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ ಎಂದರು.
ಇನ್ನು ರೆಸ್ಟೋರೆಂಟ್ ಮತ್ತು ಹೋಟೆಲ್ ಗಳಲ್ಲಿ ಹೋಮ್ ಡೆಲಿವರಿಗೆ ಮಾತ್ರ ಅವಕಾಶ. ಮದುವೆ ಕಾರ್ಯಕ್ರಮದಲ್ಲಿ ಹೊರಾಂಗಣದಲ್ಲಿ 200 ಒಳಾಂಗಣದಲ್ಲಿ 100 ಮಂದಿಗೆ ಅವಕಾಶ ಕಲ್ಪಿಸಲಾಗಿದೆ. ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಇದೆ. ಆದರೆ ಜಾತ್ರೆ ಮತ್ತು ಜನ ಸೇರುವ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ.
ತುರ್ತು ಮತ್ತು ಅವಶ್ಯಕ ಸೇವೆಗೆ ಮಾತ್ರ ಅಂತರ್ ಜಿಲ್ಲಾ ಪ್ರಯಾಣಕ್ಕೆ ಅವಕಾಶ. ಬೇಡಿಕೆಗೆ ಅನುಗುಣವಾಗಿ ಬಸ್ ಓಡಾಟಕ್ಕೆ ಅವಕಾಶ ಇದೆ. ವೀಕೆಂಡ್ ಕರ್ಫ್ಯೂ ನಲ್ಲಿ ಶಾಲಾ ಕಾಲೇಜು ನಡೆಯುವುದಿಲ್ಲ. ಪೂರ್ವ ನಿಗದಿತ ಪರೀಕ್ಷೆಗೆ ಹಾಜರಾಗಲು ಹಾಲ್ ಟಿಕೇಟ್ ತೋರಿಸಿ ಸಂಚರಿಸಬಹುದು. ಆದರೆ, ವೀಕೆಂಡ್ ನಲ್ಲಿ ಬಾರ್ ಗಳು ಬಂದ್ ಆಗಿರಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಎಂ. ಹೇಳಿಕೆ ನೀಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ