ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳನ್ನು ಪಡಿತರ ವ್ಯವಸ್ಥೆಯಡಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಈ ಬಗ್ಗೆ ಉಭಯ ಜಿಲ್ಲೆಗಳ ಸ್ಥಳೀಯ ರೈತರು ಹಾಗೂ ಸಾರ್ವಜನಿಕರು ಬಹುಕಾಲದ ಬೇಡಿಕೆಯನ್ನು ಕೇಂದ್ರ ಸರ್ಕಾರ ನೆರವೇರಿಸಿದೆ.
ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಕೇಂದ್ರದ ಈ ಅನುಮತಿಯಿಂದ ಉಡುಪಿ-ದಕ್ಷಿಣಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾ ಗಿದೆ. ಅದಲ್ಲದೇ, ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೂ ಈಗ ಬಲ ಬಂದಂತಾಗಿದೆ. ಇದಕ್ಕಾಗಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ