ಪುತ್ತೂರು: ಮುಸ್ಲಿಂ ಸಮುದಾಯದ ಮದುವೆ ಕಾರ್ಯಕ್ರಮದಲ್ಲಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ವೇಷಭೂಷಣ ಧರಿಸಿ ಹಿಂದೂ ಧರ್ಮದ ದೇವರಿಗೆ ಅವಮಾನ ಮಾಡಿರುವ ಘಟನೆ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಭಾರೀ ಇವರ ಈ ಕಾರ್ಯಕ್ಕ ಸ್ವತಃ ಮುಸ್ಲಿಂ ಸಮುದಾಯದವರೇ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗಿದೆ. ಉಪ್ಪಳದ ಯುವಕನ ಜೊತೆ ನಡೆದಿದ್ದ ಕೊಳ್ನಾಡು ಗ್ರಾಮದ ಯುವತಿಯೊಬ್ಬರ ಜೊತೆ ಮದುವೆ ಕಾರ್ಯಕ್ರಮ ನಡೆದಿದ್ದು, ವಧುವಿನ ಮನೆಗೆ ರಾತ್ರಿ ಆಗಮಿಸಿದ್ದ ವರ, ಕೊರಗಜ್ಜನ ವೇಷ ಭೂಷಣ ಧರಿಸಿ ಆಗಮಿಸಿದ್ದ,
ತಲೆಗೆ ಅಡಿಕೆ ಹಾಳೆ ಟೋಪಿ, ಮುಖಕ್ಕೆ ಕಪ್ಪು ಬಣ್ಣ ಹಚ್ಚಿಕೊಂಡು ವಧುವಿನ ಮನೆ ಮುಂದಿನ ರಸ್ತೆಯಲ್ಲಿ ವರನ ಗೆಳೆಯರು ಹಾಡು ಹೇಳಿ ಕುಣಿಯುತ್ತಾ ಬಂದಿದ್ದಾರೆ. ಈ ಘಟನೆಯ ವಿಡಿಯೋವನ್ನು ತೆಗೆದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ.
ಇದೀಗ ಕೊರಗಜ್ಜನಿಗೆ ಅವಮಾನ ಮಾಡಿ ಹುಚ್ಚಾಟ ಮಾಡಿದ್ದ ಯುವಕರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು. ಕೃತ್ಯವನ್ನು ಖಂಡಿಸಿ ಮುಸ್ಲಿಂ ಸಮುದಾಯದ ವ್ಯಕ್ತಿ ಎನ್ನಲಾದವರ ಆಡಿಯೋ ವೈರಲ್ ಆಗಿದೆ. ಈ ಕೃತ್ಯದಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹುಚ್ಚಾಟ ಪ್ರದರ್ಶಿಸಿದವರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ