ಇದೀಗ ಕೇಂದ್ರ ಸರಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಮಾಡಬೇಕು ಎನ್ನುವ ನಿಯಮವನ್ನು ಕಡ್ಡಾಯಗೊಳಿಸಿದೆ.
ಈ ಕುರಿತು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ. ಪಿ.ಸಿ.ಆರ್ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ದೃಢಪಟ್ಟರೂ 7 ದಿನಗಳ ಕಡ್ಡಾಯ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ.
7 ದಿನಗಳ ಹೋಂ ಕ್ವಾರಂಟೈನ್ ಮುಕ್ತಾಯಗೊಂಡ ಬಳಿಕ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಗೆ ಒಳಪಟ್ಟು, ಸಿಕ್ಕ ವರದಿಯನ್ನು ಕಡ್ಡಾಯವಾಗಿ ಸುವಿಧ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವಂತೆ ತಿಳಿಸಿದೆ. ಅದನ್ನು ಆಯಾ ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ಮಾಡುತ್ತವೆ.
ಒಂದು ವೇಳೆ ಪಾಸಿಟಿವ್ ಬಂದರೆ ಅವರ ಮಾದರಿಗಳನ್ನು ಇಂಡಿಯನ್ ಸಾರ್ಸ್-ಕೋವಿ-2 ಜಿನೊಮಿಕ್ಸ್ ಕನ್ಸಾರಿಟಿಂ(INSACOG) ಪ್ರಯೋಗಾಲಯದ ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಬಳಿಕ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹೊಸ ನಿಯಮಗಳ ಪ್ರಕಾರ, ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ಆನ್‌ಲೈನ್‌ನಲ್ಲಿ ಏರ್ ಸುವಿಧಾ ಪೋರ್ಟಲ್‌ನಲ್ಲಿ ಸ್ವಯಂಘೋಷಣೆ ನಮೂನೆ ಮತ್ತು ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು.
ವಿಮಾನ ನಿಲ್ದಾಣದಲ್ಲಿಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಾರೆ. ಈ ವೇಳೆ ರೋಗಲಕ್ಷಣ ಕಂಡುಬರುವ ತಕ್ಷಣವೇ ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ.
ಈ ವೇಳೆ ಪಾಸಿಟಿವ್ ಬಂದರೆ ಅಂತಹವರ ಸಂಪರ್ಕಕ್ಕೆ ಬಂದಿದ್ದವರನ್ನು ಗುರುತಿಸಲಾಗುತ್ತದೆ. ಈ ನಿಯಮ 2022 ರ ಜವನರಿ 11 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಯಕರಿಗೆ ಅನ್ವಯವಾಗಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ