ಉಡುಪಿ : ಜಿಲ್ಲೆಯಲ್ಲಿ ದಿನೇ ದಿನೇ ಕೊರೋನ ಸೋಂಕು ಸ್ಪೋಟಗೊಳ್ಳುವತ್ತ ಸಾಗುತಿದ್ದು, ಒಂದೇ ದಿನದಲ್ಲಿ 72 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸ ವರ್ಷದ ನಾಲ್ಕೇ ದಿನಗಳಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 200 ರಷ್ಟಿದೆ ಎಂದು ತಿಳಿದುಬಂದಿದೆ.
ದಿನದಲ್ಲಿ 10 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆಯಲ್ಲೂ ಭಾರಿ ಹೆಚ್ಚಳ ಕಂಡುಬಂದಿದ್ದು 282 ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಕಂಡುಬಂದ 72 ಮಂದಿಯಲ್ಲಿ 38 ಮಂದಿ ಪುರುಷರಾದರೆ 34 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 66 ಮಂದಿ ಉಡುಪಿ ತಾಲೂಕಿಗೆ ಸೇರಿದವರು. ಉಳಿದವರಲ್ಲಿ ಇಬ್ಬರು ಕುಂದಾಪುರ, ಮೂವರು ಕಾರ್ಕಳ ತಾಲೂಕಿಗೆ ಸೇರಿದ್ದರೆ, ಒಬ್ಬರು ಹೊರಜಿಲ್ಲೆಯವರಲ್ಲೂ ಸೋಂಕು ಪತ್ತೆ ಯಾಗಿದೆ. ಪಾಸಿಟಿವ್ ಬಂದ ಐವರಿಗೆ ಆಸ್ಪತ್ರೆಯಲ್ಲಿ ಹಾಗೂ ಉಳಿದ 67 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನು ಹೊರತುಪಡಿಸಿ ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ