Slider


ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಅವಧಿ ವಿಸ್ತರಣೆ 1-2-2022

2021-2022 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಅಥವಾ ಅರೆ ಅಲೆಮಾರಿ, ಪ್ರವರ್ಗ 1, ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ - ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮುಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಿಸಿದೆ.

 ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು 31.01.2022 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿ ನಿಗದಿಗೊಳಿಸಲಾಗಿತ್ತು.

ಆದರೆ ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲು ಮನವಿಯನ್ನು ಸಲ್ಲಿಸಿದ್ದು, ಇದೀಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿ 28.02.2022 ರವರೆಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo