Slider

ಹಿಜಾಬ್ ವಿವಾದ:-ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಮಾಹಿತಿ ಸೋರಿಕೆ ದೂರು ದಾಖಲು.11-2-2022

ಉಡುಪಿ: ವಿದ್ಯಾರ್ಥಿಗಳ ಖಾಸಗಿ ಮಾಹಿತಿಯನ್ನೊಳಗೊಂಡ ಕಾಲೇಜಿನ ದತ್ತಾಂಶ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದ್ದು ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ದತ್ತಾಂಶ ಸೋರಿಕೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಕರು ಪದವಿಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು, ಮಹಿಳಾ ಹಕ್ಕು ಆಯೋಗ, ಬೆಂಗಳೂರು, ಉಡುಪಿ ಜಿಲ್ಲಾಧಿಕಾರಿ ಹಾಗೂ ಉಡುಪಿಯ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಭೇಟಿಯಾಗಿ ದೂರು ನೀಡಲಾಯಿತು. 

ಸೋರಿಕೆಯಾದ ದತ್ತಾಂಶದಲ್ಲಿ ವಿದ್ಯಾರ್ಥಿನಿಯರ ಖಾಸಗಿ ಮಾಹಿತಿಗಳಿದ್ದು ಅದನ್ನು ಕೆಲವು ದುಷ್ಕರ್ಮಿಗಳು ದುರುಪಯೋಗ ಪಡಿಸಿಕೊಂಡು ಕಿರುಕುಳ ನೀಡುತ್ತಿರುವ ಕುರಿತು ವಿದ್ಯಾರ್ಥಿನಿಯರು ಈಗಾಗಲೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಖಾಸಗಿ ಮಾಹಿತಿಯ ಗೌಪ್ಯತೆಯ ಕಾಯ್ದುಕೊಳ್ಳುವುದು ಆಯಾ ಕಾಲೇಜಿನ ಆದ್ಯ ಕರ್ತವ್ಯ. ಆದರೆ ಇಲ್ಲಿ ಕಾಲೇಜು ಸ್ಪಷ್ಟವಾಗಿ ನಿಯಮ ಉಲ್ಲಂಘನೆ ಮಾಡಿದ್ದು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo