ಕೋಟ: ವಡ್ಡರ್ಸೆ ಶ್ರೀಮಹಾಲಿಂಗೇಶ್ವರ ದೇಗುಲದಲ್ಲಿ ಶೈನ್ ಈವೆಂಟ್ಸ್ ಸಂಸ್ಥೆಯ ಆಶ್ರಯದಲ್ಲಿ ಶ್ರೀರಾಮ ಭಜನಾ ಸ್ಪರ್ಧೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮವನ್ನು ಬಸ್ರೂರು ಮಹಾಲಿಂಗೇಶ್ವರ ದೇಗುಲದ ಆಡಳಿತ ಮೊಕ್ತೇಸರರಾದ ಆಪ್ಪಣ್ಣ ಹೆಗ್ಡೆ ಉದ್ಘಾಟಿಸಿ ಮಾತನಾಡಿ, ಹಿಂದೂ ಧಾರ್ಮಿಕ ಸಂಸ್ಕೃತಿಯಲ್ಲಿ ಭಜನೆಗೆ ವಿಶೇಷ ಮಹತ್ವವಿದೆ. ಭಜನೆ ಮೂಲಕ ಸಂಸ್ಕಾರ, ಸಂಸ್ಕೃತಿಗಳು ಉದ್ವೀಪನಗೊಳ್ಳುತ್ತದೆ. ಪ್ರತಿ ಮನೆಯಲ್ಲೂ ಶಾಂತಿ-ನೆಮ್ಮದಿ ಹಾಗೂ ಧಾರ್ಮಿಕ ವಾತವರಣ ನೆಲೆಗೊಳ್ಳುತ್ತದೆ ಎಂದರು.
ವಡ್ಡರ್ಸೆ ಮಹಾಲಿಂಗೇಶ್ವರ ದೇಗುಲದ ಆಡಳಿತ ಮೊಕ್ತೇಸರ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮಾಂತರ ಭಾಗದಲ್ಲಿ ಇಂತಹ ಕಾರ್ಯಕ್ರಮ ಸಂಘಟನೆಗೊಳ್ಳುತ್ತಿರುವುದು ಅತ್ಯಂತ ಖುಷಿಯ ಸಂಗತಿಯಾಗಿದೆ. ಯುವ ಮನಸ್ಸಗಳಲ್ಲಿ ಭಜನಾಚಿಂತನೆ ಪುನಃ ರೂಪುಗೊಳ್ಳಲಿ ಎಂದರು.
ಕಾರ್ಯಕ್ರಮದ ಸಂಯೋಜಕರಾದ ಸುಶಾಂತ್ ಶೆಟ್ಟಿ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಹಿರಿಯ ಭಜಕರಾದ ಹವರಾಲು ಭುಜಂಗ ಶೆಟ್ಟಿ, ಬಾಬು ಪೂಜಾರಿ ಅಚ್ಲಾಡಿ ಮುಲ್ಲಿಬೆಟ್ಟು, ವಡ್ಡರ್ಸೆ ರಾಮಕೃಷ್ಣ ಉಡುಪ ಅವರನ್ನು ಸಮ್ಮಾನಿಸಲಾಯಿತು.
ವಡ್ಡರ್ಸೆ ಗ್ರಾ.ಪಂ.ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಸುಲೋಚನ ಗಣೇಶ್, ಉದ್ಯಮಿ ಪ್ರಮೋದ್ ಶೆಟ್ಟಿ, ಭಜನಾ ಪರಿಷತ್ ಕುಂದಾಪುರ ಘಟಕದ ಅಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್, ನಿವೃತ್ತ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಸನ್ಶೈನ್ ಗೆಳೆಯರ ಬಳಗದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಉಪಸ್ಥಿತರಿದ್ದರು.
ಯುವ ಸಂಘಟಕ ಅಭಿಜಿತ್ ಪಾಂಡೇಶ್ವರ ಕಾರ್ಯಕ್ರಮ ನಿರೂಪಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ