ಇನ್ನು ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ.ಕಾಲೇಜು ಬಳಿಕ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತುಂಬೆ ಬಳಿಯ ಬಿಎ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಸೀ ಬರ್ಡ್ ಅಪಘಾತದ ನಂತರ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದು ನಂ್ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಪರಿಣಾಮ ಬಸ್ ಟ್ಯಾಂಕ್‌ನಿಂದ ಡೀಸೆಲ್ ಸೋರಿಕೆಯಾಗತೊಡಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ನೀರು ಸಿಂಪಡಿಸಿ, ಅಪಘಾತದಿಂದ ಹೆಚ್ಚಿನ ಹಾನಿಯಾಗದಂತೆ ಕ್ರಮಕೈಗೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ