ಇನ್ನು ಮೃತ ಕಾರ್ಮಿಕನನ್ನು ಮಹಾರಾಷ್ಟ್ರ ರತ್ನಗಿರಿಯ ನಿವಾಸಿ ನಿತಿನ್ ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇತರ ಇಬ್ಬರು ಕಾರ್ಮಿಕರೊಂದಿಗೆ ಬಂದರಿನಲ್ಲಿ ನಾಗಾರ್ಜುನ ಕಂಪನಿಯ ಪೈಪ್ ಲೈನ್ ಕಾಮಗಾರಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ಕಣ್ಮರೆಯಾಗಿದ್ದನು.
ಆ ಕೂಡಲೇ ಸ್ಥಳಕ್ಕೆ ಆಗಮಿಸಿದ ಮುಳುಗುತಜ್ಞ ಈಶ್ವರ್ ಮಲ್ಪೆ ಅವರು ತುಂಬಾ ಸಮಯ ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಹಾಗಾಗಿ ಇಂದು ಕೂಡಾ ಕಾರ್ಯಾಚರಣೆ ನಡೆಸಿದಾಗ ವ್ಯಕ್ತಿ ಬಿದ್ದ ಜಾಗದಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ