Slider

ಉಡುಪಿಯ ಮತ್ತೊಂದು ಕಾಲೇಜಿನಲ್ಲಿ ಹಿಜಾಬ್ ವಿವಾದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಂಧಾನ ವಿಫಲ 2-2-2022

ಕುಂದಾಪುರ : ಉಡುಪಿಯಲ್ಲಿನ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ.

ಘಟನೆಗೆ ಸಂಬಂಧಿಸಿದಂತೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ.

ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಹೊರತಾಗಿ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ ಪ್ರವೇಶ ಇಲ್ಲ.ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

ತರಗತಿಯ ಒಳಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಕೆಲ ವಿದ್ಯಾರ್ಥಿಗಳು ಹೇಳಿದ್ದಾರೆ. ಈಗಾಗಲೇ ಕೇಸರಿ ಶಾಲು ಧರಿಸಿ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo