ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಆಯಕಟ್ಟಿನ ಜಾಗದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ಸೋಮವಾರ ಬೆಳಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹಾಗೂ ಡಿಸಿಪಿಗಳ ನೇತೃತ್ವದಲ್ಲಿ ನಗರದ ಬಳ್ಳಾಲ್ ಬಾಗ್ ವೃತ್ತ, ಎಂ.ಜಿ. ರಸ್ತೆ, ಕೆ.ಎಸ್.ರಾವ್ ರೋಡ್, ಹಂಪನಕಟ್ಟೆ ಪ್ರದೇಶದಲ್ಲಿ ಪೊಲೀಸರ ರೂಟ್ ಮಾರ್ಚ್ ನಡೆಯಿತು.
ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ಟೀ ಕುಡಿಯುತ್ತಾ ನಿಂತಿದ್ದ ಕೊಸೀಗೆಹಟ್ಟಿಯ ಹರ್ಷಶೆಟ್ಟಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬರ್ಬರವಾಗಿ ಕೊಂದಿದ್ದರು. ಇದರ ಬೆನ್ನಲ್ಲೇ ಖಾಸಗಿ ಬಸ್ ನಿಲ್ದಾಣದ ಬಳಿ ಕಿಡಿಗೇಡಿಗಳು ವಾಹನಗಳು, ಅಂಗಡಿಮುಂಗಟ್ಟುಗಳಿಗೆ ಕಲ್ಲು ತೂರಾಟ ನಡೆಸಿದ್ದು, ನಗರದಲ್ಲಿ ರಾತ್ರಿ ಪ್ರಕ್ಷ್ಯುಬ್ಧ ವಾತಾವರಣ ಸೃಷ್ಟಿಯಾಗಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ