ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯಾವುದೇ ರೀತಿಯಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳುತ್ತಿದೆ. ಜನರು ಶಾಂತಿಯನ್ನು ಕಾಪಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, 13 ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. A1 ಮೊಹಮ್ಮದ್ ಖಾಸಿಪ್, A 2 ಸೈಯದ್ ನದೀಮ್, A3 ಆಸೀಫ್ ಉಲ್ಲಾ ಖಾನ್, A4 ರಿಹಾನ್ ಷರೀಫ್, A5 ನಿಹಾನ್ ಮತ್ತು A6 ಅಬ್ದುಲ್ ಅಫ್ನನ್ ಎಂಬುವವರನ್ನು ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಇನ್ನು ಮೊಹಮ್ಮದ್ ಖಾಸಿಪ್. ಆಸೀಫ್ ಉಲ್ಲಾ, ರಿಹಾನ್ ಷರೀಫ್ ಹಾಗೂ ನಿಹಾನ್ ಹರ್ಷ ಕೊಲೆ ಮಾಡಿದ್ದಾರೆ. ಬಂಧನಕ್ಕೆ ಒಳಗಾಗಿರು ಎಲ್ಲಾ ಆರೋಪಿಗಳು ಕೂಡ ಶಿವಮೊಗ್ಗ ನಿವಾಸಿಗಳೇ ಆಗಿದ್ದಾರೆ. ಇರುವರೆಗೆ ಒಟ್ಟು 13 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎಸ್‌ಪಿ ಬಿ.ಎಂ.ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಹರ್ಷ ಪ್ರಕರಣದ ಬೆನ್ನಲ್ಲೇ ಒಟ್ಟು 18 ವಾಹನಗಳ ಮೇಲೆ ದಾಳಿ ನಡೆಸಿ, ಸುಟ್ಟು ಹಾಕಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರದಲ್ಲಿ ಸುಮಾರು ಎರಡು ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇನ್ನು ಕೊಲೆಯಾಗಿರುವ ಹರ್ಷ ವಿರುದ್ದ ಎರಡು ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ