ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಾಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು.
ವಿದ್ಯಾರ್ಥಿನಿಯರು ಇದಕ್ಕೆ ನಿರಾಕರಿಸಿದ್ದಾರೆ. ಈ ಸಂದರ್ಭದಲ್ಲಿ ವಾಗ್ವಾದ ನಡೆದಿದೆ.
ನಾವು ಮೊದಲಿನಿಂದಲೂ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುತ್ತಿದ್ದೇವೆ. ಬೇಕಾದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಬರಲಿ. ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ. ಕುಂದಾಪುರ ಸರ್ಕಾರಿ ಕಾಲೇಜಿನ ಉಲ್ಲೇಖವಿದ್ದರೆ ಮಾತ್ರ ನಾವು ಹಿಜಾಬ್ ತೆಗೆಯುತ್ತೇವೆ ಎಂದು ವಿದ್ಯಾರ್ಥಿನಿಯರು ವಾದಿಸಿದ್ದಾರೆ.
ಸರ್ಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ 1200 ಕ್ಕೂ ಅಧಿಕ ಕಾಲೇಜಿದೆ. ಪ್ರತಿಯೊಂದು ಕಾಲೇಜಿಗೂ ನೋಟಿಸ್ ನೀಡಲು ಆಗುವುದಿಲ್ಲ. ಸರ್ಕಾರ ಏನು ಹೇಳುತ್ತದೋ ಅದನ್ನು ನಾವು ಅನುಸರಿಸುತ್ತೇವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ನೂರಾರು ಹಿಂದೂ ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದರು. ಆದರೆ ಇಂದು ಕೇಸರಿ ಶಾಲು ತೊಡದೇ ಕಾಲೇಜಿಗೆ ಹಿಂದೂ ವಿದ್ಯಾರ್ಥಿಗಳು ಬಂದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ