ಶಶಾಂಕ್ ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈತ ಬಿದ್ಕಲ್ ಕಟ್ಟೆ ಐ.ಟಿ.ಐ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಜನೆ ಮಾಡುತಿದ್ದ.
ಶಶಾಂಕ್, ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ಯುವತಿ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ನಾಲ್ವರು ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ.
ಗಾಯಾಳು ವಿದ್ಯಾರ್ಥಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕುಂದಾಪುರ ಡಿ.ವೈ.ಎಸ್.ಪಿ ಶ್ರೀಕಾಂತ್ ಕೆ., ಸಿ.ಪಿ.ಐ ಗೋಪಿಕೃಷ್ಣ, ಪಿ.ಎಸ್.ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ