ಈ ಘಟನೆಗೆ ಸಂಬಂಧಿಸಿ ಇದೀಗ ಪೊಲೀಸರು ಘಟನಾ ಸ್ಥಳಕ್ಕೆ ದಾಳಿ ನಡೆಸಿ ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್ ಎಂದು ಗುರುತಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್ ಮಾಡಿ ಯುವತಿಯರು ಮತ್ತು ಬಾಲಕಿಯರನ್ನು ಬೆದರಿಸಲಾಗುತ್ತಿತ್ತು. ದಾಳಿ ನಡೆಸಿದ ಪೊಲೀಸರು, ಪಿ.ಯು.ಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಿದ್ದಾರೆ.
ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ದೂರು ನೀಡಿದ್ದು, ಪೋಕ್ಸೊ ಮತ್ತು ಐ.ಟಿ.ಪಿ. ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ