Slider

ಹಿಜಾಬ್ ಹೆಸರಲ್ಲಿ ಧರ್ಮಾಂಧತೆಯನ್ನು ವಿರೋಧಿಸುತ್ತೇವೆ:-ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ4-2-2022

 ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಿಕ್ಷಣ ವ್ಯವಸ್ಥೆಯಲ್ಲಿ ಅನಗತ್ಯ ಗೊಂದಲಗಳು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು, ಒಂದೂವರೆ ವರ್ಷದ ಹಿಂದೆ ಯಾವ ಸಮಸ್ಯೆಗಳೂ ಇರಲಿಲ್ಲ. ಹಿಜಾಬ್ ಹೆಸರಲ್ಲಿ ಧರ್ಮಾಂಧತೆಯನ್ನು ನಾವು ವಿರೋಧಿಸುತ್ತೇವೆ. ಹೊರಗಿನ ಮತಾಂಧ ಶಕ್ತಿಗಳು ಇದನ್ನು ಮಾಡುತ್ತಿವೆ ಎಂದು ಹೇಳಿದರು.

ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತಾಗಿ ಕೇಸರಿ ಶಾಲು ಧರಿಸಿದ್ದಾರೆ. ಒಂದು ತಪ್ಪಾದರೆ ಇನ್ನೊಂದೂ ತಪ್ಪಲ್ಲವೇ ? ಏನೇ ಆಗಲಿ ಶಿಕ್ಷಣ ಸಂಸ್ಥೆಗಳಲ್ಲಿ ಗೊಂದಲ ಇರಬಾರದು. ಶಾಲಾ ಸಮವಸ್ತ್ರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು. ಹಿಜಾಬ್, ಕೇಸರಿ ಶಾಲು ಎಂಬ ಚರ್ಚೆ ಬೇಡ ಎಂದು ತಿಳಿಸಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo