Slider

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತೆ ಗಂಭೀರ 4-2-2022

ಕೊರೊನಾದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ. 92 ವರ್ಷದ ಲತಾ ಮಂಗೇಶ್ಕರ್‌ ಅವರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಹೇಳಲಾಗಿತ್ತಾದರೂ ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಐಸಿಯು ನಲ್ಲಿರಿಸಿ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ ಎಂದು ತಿಳಿದುಬಂದಿದೆ.

ಜನವರಿ ಅಂತ್ಯದ ಸುಮಾರಿಗೆ ಲತಾ ಮಂಗೇಶ್ಕರ್‌ ಕೋವಿಡ್‌ ಸೋಂಕಿಗೊಳಗಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ನಿರಂತರ ಪ್ರಯತ್ನದ ಪರಿಣಾಮವಾಗಿ ಅವರು ಕೊರೊನಾದಿಂದ ಗುಣಮುಖರಾಗಿದ್ದರೂ ಸಹ ಇನ್ನಿತರೆ ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಆಸ್ಪತ್ರೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು.

ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರೂ ಸಹ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರ ತಂಡ ಹೇಳಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಮನವಿ ಮಾಡಿದ್ದಾರೆ. ಕುಟುಂಬ ಸದಸ್ಯರೂ ಸಹ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo