ಕುಂದಾಪುರ: ಕುಂದಾಪುರ ಜ್ಯೂನಿಯರ್ ಕಾಲೇಜಿನ ಎದುರು ರಸ್ತೆಯಲ್ಲಿ ಒಂದು ಕೋಮಿನ ವಿದ್ಯಾರ್ಥಿಗಳು ತಲೆಗೆ ಹಿಜಾಬ್ ಧರಿಸಿ ಶಾಲೆ ಪ್ರವೇಶಿಸುವ ವಿಚಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅವರ ಬೆಂಬಲಕ್ಕೆಂದು ಬಂದ ಐದಾರು ಮಂದಿ ಮಾರಕಾಯುಧಗಳನ್ನು ಹಿಡಿದು ಗಲಭೆಗೆ ಯತ್ನಿಸುತ್ತಿದ್ದಾಗ ಕುಂದಾಪುರ ಪಿ.ಎಸ್.ಐ ಸದಾಶಿವ ಗವರೋಜಿ, ಸಿಬ್ಬಂದಿಗಳ ತಂಡ ಇಬ್ಬರನ್ನು ಬಂಧಿಸಿದ ಘಟನೆ ಫೆಬ್ರವರಿ . 4 ಶುಕ್ರವಾರ ನಡೆದಿದೆ.
ಪ್ರತಿಭಟನೆಯ ಹಿನ್ನೆಲೆ ಬಂದೋಬಸ್ತು ಕರ್ತವ್ಯದಲ್ಲಿದ್ದ ಒಂದು ಕೋಮಿನ ವಿದ್ಯಾರ್ಥಿಗಳ ಪರವಾಗಿ 5-6 ವ್ಯಕ್ತಿಗಳು ಮಾರಕಾಯುಧಗಳೊಂದಿಗೆ ಆಗಮಿಸಿದ್ದು ಯಾವುದೇ ಸಮಯದಲ್ಲಾದರೂ ಚೂರಿಯನ್ನು ಬೀಸುತ್ತಾ ಇತರ ಸಾರ್ವಜನಿಕರ ಜೀವಕ್ಕೆ ಅಪಾಯವಾಗುವಂತೆ ವರ್ತಿಸುತ್ತಿರುವುದನ್ನು ಗಮನಿಸಿ ಆ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಹೋದಾಗ ಅವರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದು ಆ ಪೈಕಿ ಇಬ್ಬರು ವ್ಯಕ್ತಿಗಳನ್ನು ಸಿಬ್ಬಂದಿಯವರ ಸಹಾಯದಿಂದ ವಶಕ್ಕೆ ಪಡೆಯಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಮೂಲದ ಹಾಜಿ ಅಬ್ದುಲ್ ಮಜೀದ್ (32), ರಜಬ್ (41) ಬಂಧಿತ ಆರೋಪಿಗಳಾಗಿದ್ದು ಖಲೀಲ್, ರಿಜ್ವಾನ್ ಹಾಗೂ ಇಫ್ತೀಕರ್ ಪರಾರಿಯಾಗಿದ್ದಾರೆ.
ಆರೋಪಿ ಹಾಜಿ ಅಬ್ದುಲ್ ಮಜೀದ್ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ 7 ಪ್ರಕರಣಗಳು ದಾಖಲಾಗಿದ್ದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ. ಇನ್ನೋರ್ವ ಆರೋಪಿ ರಜಬ್ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.
ಆರೋಪಿಗಳು ಮತೀಯವಾಗಿ ಕೋಮು ಸಂಘರ್ಷ ಉಂಟುಮಾಡುವ ಪ್ರವೃತ್ತಿಯವರಾಗಿದ್ದು ಮಾರಕಾಯುಧಗಳೊಂದಿಗೆ ಅಕ್ರಮ ಕೂಟ ಸೇರಿ ಹಠಾತ್ ಪ್ರಚೋದನೆಯಿಂದ ಮಾರಕಾಯುಧಗಳನ್ನು ಬೀಸಿ ಸಾರ್ವಜನಿಕರ ಪ್ರಾಣಕ್ಕೆ ಅಪಾಯಯವನ್ನುಂಟು ಮಾಡಲು ಪ್ರಯತ್ನಿಸಿದ್ದಾರೆಂದು ತನಿಖೆ ವೇಳೆ ತಿಳಿದುಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ