ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದುದ ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ