ಇತ್ತೀಚೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ 92 ವರ್ಷದ ಲತಾ ಮಂಗೇಶ್ಕರ್, ಕೋವಿಡ್ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಇಂದು ಬೆಳಿಗ್ಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಕೊನೆಯುಸಿರೆಳೆದಿದ್ದಾರೆ. ಲತಾ ಅವರ ಪಾರ್ಥಿವ ಶರೀರವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಕೊಂಡಯ್ಯಲಾಗುತ್ತಿದ್ದು, ಅಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಇನ್ನು ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಎರಡು ದಿನ ಶೋಕಾಚರಣೆ ಘೋಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ