ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಖಡಕ್ ನಿರ್ಣಯಗಳು ಹಾಗು ಭಾಷಣದಿಂದಾಗಿ ಸದಾ ಸುದ್ದಿಯಲ್ಲಿರುತ್ತಾರೆ. ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂನಲ್ಲಿನ ಮದರಸಾಗಳ ಬಗ್ಗೆ ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ ರಾಜ್ಯದಲ್ಲಿ ನಡೆಯುತ್ತಿರುವ ಮದರಸಾಗಳನ್ನು ಶೀಘ್ರದಲ್ಲೇ ಮುಚ್ಚಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದರು. ಅಷ್ಟೇ ಅಲ್ಲ, ಮದರಸಾಗಳಿಗೆ ಸಂಬಂಧಿಸಿದಂತೆ ಹಲವು ಹೇಳಿಕೆಗಳನ್ನೂ ನೀಡಿದ್ದರು. ಇದರ ಬಗ್ಗೆ ದೇಶಾದ್ಯಂತ ಬಹಳಷ್ಟು ಚರ್ಚೆಯಾಗಿತ್ತು. 2021 ರಲ್ಲಿ, ಅಸ್ಸಾಂನಲ್ಲಿ ನಡೆಯುತ್ತಿರುವ ಮದರಸಾಗಳನ್ನು ಮುಚ್ಚುವ ಮತ್ತು ಅವುಗಳ ಜಾಗದಲ್ಲಿ ಸಾಮಾನ್ಯ ಶಾಲೆಗಳನ್ನು ತೆರೆಯುವ ಅಸ್ಸಾಂ ಸರ್ಕಾರದ ನಿರ್ಧಾರದ ವಿರುದ್ಧ 13 ಜನರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ನಿರ್ಧಾರವನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಅರ್ಜಿಗಳನ್ನ ವಜಾ ಮಾಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ