Slider

ಹಿಜಾಬ್ ಹಿಂದಿನ ಹಿಡನ್ ಅಜೆಂಡಾವನ್ನು ಬಗ್ಗುಬಡಿಯುತ್ತೇವೆ :-ಸಚಿವ ಸುನಿಲ್ ಕುಮಾರ್ ಹೇಳಿಕೆ 7-2-2022

ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಸಂಬಂಧ ರಾಜ್ಯ ಸರ್ಕಾರ ಕಾನೂನು ಮಾಡಿದೆ. ಈ ಕಾನೂನನ್ನು ಎಲ್ಲರು ಗೌರವಿಸಬೇಕು. ಇಲ್ಲದಿದ್ದರೆ ಇದರ ಹಿಂದೆ ಯಾವುದೋ ದೊಡ್ಡ ಪ್ರಮಾಣದ ಹಿಡನ್ ಅಜೆಂಡಾ ಇದೆ ಎಂಬುದು ಅರ್ಥ. ಆ ಹಿಡನ್ ಅಜೆಂಡಾವನ್ನು ಸರ್ಕಾರ ಬಗ್ಗು ಬಡಿಯುತ್ತದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ನೆಲದ ಕಾನೂನನ್ನು ಗೌರವಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ. ಅದನ್ನು ಯಾರು ಗೌರವಿಸುವುದಿಲ್ಲವೋ ಅವರು ಈ ನೆಲದಲ್ಲಿ ಇರಲು ಅನರ್ಹರು. ಸುತ್ತೋಲೆ, ಕಾನೂನುಗಳಿಗಿಂತ ಹೆಚ್ಚಾಗಿ, ಶಾಲಾ-ಕಾಲೇಜುಗಳಲ್ಲಿ ಎಲ್ಲರೂ ಒಟ್ಟಾಗಿ ಸಮಾನತೆಯಿಂದ ಶಿಕ್ಷಣ ಕಲಿಯಬೇಕು ಎಂಬುದು ನಮ್ಮ ಪರಂಪರೆಯಲ್ಲಿಯೇ ಇದೆ. ಇದರಲ್ಲಿ ಮತೀಯ ಸಂಗತಿಗಳು ವಿಜೃಂಭಿಸುವುದು ಒಳ್ಳೆಯದಲ್ಲ ಎಂದು ಮನವಿ ಮಾಡಿದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo