Slider

ಉಡುಪಿ:-ಸರ್ಕಾರದ ಆದೇಶವನ್ನೂ ಲೆಕ್ಕಿಸದೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು 7-2-2022

ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಸೋಮವಾರ ಉಡುಪಿ ಸರ್ಕಾರಿ ಬಾಲಕಿಯರ ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದಿದ್ದಾರೆ.

ತರಗತಿಯಲ್ಲಿ ಹಿಜಾಬ್‌ಗೆ ಅನುಮತಿ ಕೋರಿ ನ್ಯಾಯಾಲಯದ‌ ಮೊರೆ ಹೋಗಿದ್ದೇವೆ.
ತೀರ್ಪು ಬರುವವರೆಗೂ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುವುದಾಗಿ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ಹೈಕೋರ್ಟ್‌ನಲ್ಲಿ ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಬರದಿದ್ದರೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ. ಹಿಜಾಬ್ ಧರಿಸುವುದು ಸಂವಿಧಾನ ನೀಡಿರುವ ಹಕ್ಕಾಗಿದ್ದು ಯಾವುದೇ ಕಾರಣಕ್ಕೂ ಮೊಟಕುಗೊಳಿಸಲು ಬಿಡುವುದಿಲ್ಲ ಎಂದು ವಿದ್ಯಾರ್ಥಿನಿಯರು ಸ್ಪಷ್ಟ ಪಡಿಸಿದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo