Slider

ಮಂಗಳೂರಿನ ವಕೀಲ ರಾಜೇಶ್​ ಭಟ್​ಗೆ ಷರತ್ತುಬದ್ಧ ಜಾಮೀನು 9-2-2022

ಇಂಟರ್ನ್​​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.

ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್​ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್​ನಲ್ಲಿ ದೂರು ದಾಖಲಿಸಿದ್ದರು. ಕಚೇರಿಯಲ್ಲಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದರು. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದರು ಎಂದು ಎಂದು ರಾಜೇಶ್​ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ರಾಜೇಶ್​, ಡಿ.20ರಂದು ಮಂಗಳೂರು ನ್ಯಾಯಾಲಯಕ್ಕೆ ಶರಣಾಗಿದ್ದರು.

ಬಳಿಕ ಆರೋಪಿಯನ್ನ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಬಳಿಕ ರಾಜೇಶ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ನಡುವೆ ಮಂಗಳೂರು ಕೋರ್ಟ್​ ಹಾಗೂ ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಹೈಕೋರ್ಟ್​ನಲ್ಲಿ ಜಾಮೀನು ಮಂಜೂರಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo