ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನವನ್ನೇ ಸೃಷ್ಠಿಸಿದೆ.
ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಕೇಂದ್ರ ಗೃಹ ಸಚಿವ ಏಪ್ರಿಲ್ 1ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ಆಗಮಸುತ್ತಿರುವಂತ ಅವರು, ಕೇಸರಿ ಪಕ್ಷದ ಪ್ರಚಾರವನ್ನು ಚುರುಕುಗೊಳಿಸೋದಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಇನ್ನೂ ಶಿವಕುಮಾರ ಸ್ವಾಮೀಜಿಗಳ 116ನೇ ಜಯಂತಿಯ ಕಾರ್ಯಕ್ರಮದಲ್ಲಿಯೂ ಭಾಗವಹಿಸಲಿದ್ದಾರೆ. ಜೊತೆಗೆ ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಾಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ