Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಂಟ್ವಾಳ:-ರಾಷ್ಟ್ರಧ್ವಜಕ್ಕೆ ಅವಮಾನ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು 1-3-2022

ಬಂಟ್ವಾಳ:- ಆರ್.ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವ ಜತೆಗೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದ ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಫೆ. 20 ರಂದು ದೇವಂದಬೆಟ್ಟು ದೇವಸ್ಥಾನದ ಬ್ರಹ್ಮಕಲಶದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಅವರು ರಾಷ್ಟ್ರಧ್ವಜದ ಕುರಿತು ಕೀಳಾಗಿ ಮಾತನಾಡುವ ಜತೆಗೆ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ. ಪ್ರಸ್ತುತ ಅದರ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo