Slider

"ಆ ದಿನಗಳು" ಖ್ಯಾತಿಯ ನಟ ಚೇತನ್‌ಗೆ ಸಂಕಷ್ಟ, ಗಡಿಪಾರು ಸಾಧ್ಯತೆ.12-3-2022

ಆ ದಿನಗಳು' ಖ್ಯಾತಿಯ ನಟ ಚೇತನ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ. ಅಮೇರಿಕ ಪ್ರಜೆಯಾಗಿದ್ದರೂ ಚೇತನ್ ಅವರು ಭಾರತದಲ್ಲಿ ಹೋರಾಟ ನಡೆಸಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ರಾಜ್ಯ ಸರ್ಕಾರಕ್ಕೆ ಬೆಂಗಳೂರು ಪೊಲೀಸರು ವರದಿ ಸಲ್ಲಿಸಿದ್ದಾರೆ.

ಸಾಗರೋತ್ತರ ಭಾರತೀಯ ನಾಗರಿಕ ಪತ್ರ ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಚೇತನ್ ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿದೇಶಿ ಪ್ರಜೆಗಳು ಭಾರತದಲ್ಲಿ ಹೋರಾಟದಲ್ಲಿ ಭಾಗಿಯಾಗುವಂತಿಲ್ಲ. ಆದರೆ, ಚೇತನ್ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರ, ವಿದೇಶಾಂಗ ಇಲಾಖೆಗೆ ವರದಿ ರವಾನಿಸಲಿದೆ. ಈ ವರದಿ ಆಧರಿಸಿ ಚೇತನ್ ಅವರನ್ನು ಗಡೀಪಾರು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo