Slider

ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಎಫ್.ಐ.ಆರ್. ಇನ್ಸ್‌ಪೆಕ್ಟರ್ ಅಮಾನತು.12-3-2022

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್‌ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ.

ಧಾರವಾಡ ಗ್ರಾಮೀಣ ಶ್ರೀಧರ್ ಅವರನ್ನು ಡಿಜಿ-ಐಜಿಪಿ ಪ್ರವೀಣ್ ಸೂದ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜನವರಿ 25 ರಂದು ಸಭಾಪತಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಸರ್ವೋದಯ ಶಿಕ್ಷಣ ಸಂಸ್ಥೆ ವಾಲ್ಮೀಕಿ ಮಹಾಸಭಾದ ನಡುವೆ ನಡೆದ ವಿವಾದಕ್ಕೆ ಮುಗದ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಮೋಹನ್ ಗುಡಿಸಲಮನೆ ಎಂಬುವರು ದೂರು ನೀಡಿದ್ದರು. 

ಸರ್ವೋದಯ ಶಿಕ್ಷಣ ಸಂಸ್ಥೆ ಶಿಕ್ಷಕರ ಜೊತೆಗೆ ಬಸವರಾಜ ಹೊರಟ್ಟಿ ಅವರನ್ನು ಐದನೇ ಆರೋಪಿಯನ್ನಾಗಿ ಮಾಡಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo