ಜ್ಯೋತಿ ತನ್ನ ಪತಿ ಶರತ್ ಹಾಗೂ ಮಗು ಜೊತೆ ಸ್ಕೂಟಿಯಲ್ಲಿ ಹೆಮ್ಮಾಡಿ ಕಡೆಯಿಂದ ತೆರಳುತ್ತಿದ್ದರು, ಇದೇ ಸಂದರ್ಭ ಹೆಮ್ಮಾಡಿ ಕಡೆಯಿಂದ ಕುಂದಾಪುರ ಕಡೆಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಅತಿವೇಗದಿಂದ ಬಂದಿದ್ದು ಅದೇ ದಾರಿಯಲ್ಲಿ ತೆರಳುತ್ತಿದ್ದ ಸ್ಕೂಟಿಗೆ ಢಿಕ್ಕಿಯಾಗಿದೆ.
ಈ ಸಂದರ್ಭ ರಸ್ತೆಗೆ ಬೀಳುತ್ತಿದ್ದ ಮಗುವನ್ನು ಇನ್ನೊಂದು ಮಗ್ಗುಲಿಗೆ ಹಾಕಿ ಜ್ಯೋತಿಯವರು ಬೊಬ್ಬೆ ಹೊಡೆದರೂ ಟಿಪ್ಪರ್ ಲಾರಿ ಚಾಲಕನಿಗೆ ಕೆಳಿಸದ ಹಿನ್ನಲೆ ಆಕೆಯ ಮೇಲೆ ಟಿಪ್ಪರ್ ಹರಿದಿದೆ. ಮಗು ಹಾಗೂ ಆಕೆಯ ಪತಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ದಂಪತಿ ಕುಂದಾಪುರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ