Slider

ದೇಶದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಅಗತ್ಯವಿದೆ:-ಸಿ.ಟಿ.ರವಿ ಹೇಳಿಕೆ.12-3-2022

ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆಯ ನಂತರ, ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಜಾರಿಗೆ ತರುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಯುದ್ಧ ಪೀಡಿತ ಉಕ್ರೇನ್‌ನಿಂದ ಆಪರೇಷನ್ ಗಂಗಾ ಮೂಲಕ 20,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ನವೀನ್ ಬಂಕರ್‌ನಲ್ಲಿ ಉಳಿದುಕೊಂಡಿದ್ದರು. ಆದರೆ ಹೊರಗೆ ಬಂದ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಇದು ದುರಾದೃಷ್ಟಕರ ಸಂಗತಿ ಎಂದು ಹೇಳಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo